ಬೆಂಗಳೂರು: ಪೆನ್‍ಡ್ರೈವ್ ಪ್ರಕರಣ (Prajwal Revanna Pendrive Case) ಸದ್ದು ಮಾಡುತ್ತಿದ್ದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ಎಸ್‍ಐಟಿ (SIT) ಮುಂದಾಗಿದೆ. ಪ್ರಜ್ವಲ್ ರೇವಣ್ಣಗೆ (Prajwal Revanna) ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯಲಾಗಿದ್ದು, ಅವರಿಗೆ ಸೇರಿದ ಬ್ಯಾಂಕ್ ಅಕೌಂಟ್‍ಗಳನ್ನು ಫ್ರೀಝ್ (Bank Accounts Freeze) ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.
ಈಗಾಗಲೇ ಪ್ರಜ್ವಲ್ ಖಾತೆಗೆ ಹಣ ಸಂದಾಯ ಆಗಿರುವ ಎಲ್ಲಾ ಮಾಹಿತಿಯನ್ನು ಎಸ್‍ಐಟಿ ಕಲೆಹಾಕಿದೆ. ಎಸ್‍ಐಟಿ ಮೂಲಗಳ ಮಾಹಿತಿಯ ಪ್ರಕಾರ ಪ್ರಜ್ವಲ್ 7 ಬ್ಯಾಂಕ್ ಅಕೌಂಟ್‍ಗಳನ್ನು ಹೊಂದಿದ್ದು, ಆ ಬ್ಯಾಂಕ್‍ಗಳ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಪಡೆದಿದ್ದಾರೆ. ಪ್ರಜ್ವಲ್ ತಲೆಮರೆಸಿಕೊಂಡು ತಿಂಗಳಾಗುತ್ತ ಬಂದಿದ್ದು, ಇನ್ನೂ ಪತ್ತೆಯಾಗದ ಹಿನ್ನೆಲೆ ಈ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ
