ಸಮಗ್ರ ಸುದ್ದಿ ಸಿನಿಮಾ

ದರ್ಶನ್‌ ಗ್ಯಾಂಗ್‌ ಅಂದರ್‌ – ಹಾಸ್ಯ ನಟನಿಗೂ ನೋಟಿಸ್‌

Share It

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗ್ಯಾಂಗ್‌ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಹೌದು. ಕೊಲೆ ನಡೆದ ಜೂನ್‌ 8 ಶನಿವಾರದಂದು ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರು ಆರ್‌ಆರ್‌ ನಗರದ ಸ್ಟೋನಿಬ್ರೂಕ್‌ ಪಬ್‌ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು. 

 ಸಂಜೆ ವೇಳೆಗೆ ಸ್ವಲ್ಪ ಕೆಲಸವಿದೆ ಎಂದು ಹೇಳಿ ದರ್ಶನ್ ಹೊರಟಿದ್ದರು. ರೇಣುಕಾಸ್ವಾಮಿ ಕೊಲೆಯಾದ ದಿನವೇ ದರ್ಶನ್‌ ಜೊತೆ ಪಾರ್ಟಿ ಮಾಡಿದ್ದರಿಂದ ಪೊಲೀಸರು ಈಗ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೊಲೆ ವಿಚಾರವಾಗಿ ಪಬ್‌ನಲ್ಲಿ ಏನಾದರೂ ಚರ್ಚೆ ನಡೆದಿತ್ತಾ ಎಂಬುದರ ಬಗ್ಗೆ ಮಾಹಿತಿ ಪಡೆಯುವ ಸಾಧ್ಯತೆಯಿದೆ. ಈಗ ನೋಟಿಸ್ ಕೊಟ್ಟು ಕರೆಸಬೇಕೇ? ಬೇಡವೇ ಎಂಬುದರ ಬಗ್ಗೆ ಪೊಲೀಸರು ಹಿರಿಯ ಅಧಿಕಾರಿಗಳ ಸಲಹೆ ಕೇಳಿದ್ದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಪ್ರಕರಣದಲ್ಲಿ ನೇರವಾಗಿ ಭಾಗಿಯಾಗದ ಕಾರಣ ಚಿಕ್ಕಣ್ಣ ಅವರನ್ನು ಬಂಧನ ಮಾಡುವುದಿಲ್ಲ. ಬದಲಾಗಿ ಸಾಕ್ಷಿಯನ್ನಾಗಿ ಪರಿಗಣಿಸಲಿದ್ದಾರೆ. ಕೊಲೆಯ ಬಗ್ಗೆ ಮಾಹಿತಿ ಇಲ್ಲದೇ ಇದ್ದರೂ ಕೂಡ, ಪಾರ್ಟಿಯಲ್ಲಿದ್ದ ಎಂಬ ಕಾರಣಕ್ಕೆ ಸಾಕ್ಷಿಯಾಗಿ ಪರಿಗಣನೆ ಮಾಡಲು ಪೊಲೀಸರು ಮುಂದಾಗಿದ್ದಾರೆ.


Share It

You cannot copy content of this page