ಸಮಗ್ರ ಸುದ್ದಿ ಸಿನಿಮಾ

ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

Share It

ಮುಂಬಯಿ: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಅಮಿತಾಬ್ ಬಚ್ಚನ್ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ವರದಿಯ ಪ್ರಕಾರ, ಬಿಗ್ ಬಿ ಅವರನ್ನು ಬಿಗಿ ಭದ್ರತೆಯ ನಡುವೆ ಇಂದು ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಯಾವಾಗಲೂ ಕೃತಜ್ಞರಾಗಿರುತ್ತೇನೆ’ ಎಂದು ಶಸ್ತ್ರಚಿಕಿತ್ಸೆಯ ನಂತರ, ಅಮಿತಾಬ್ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳ ಮೂಲಕ ತಮ್ಮ ಅಭಿಮಾನಿಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.


Share It

You cannot copy content of this page