ಬೆಂಗಳೂರು: ಹೊಸೂರು ಸಮೀಪದ ಕರ್ನೂರು ಚೆಕ್‍ಪೋಸ್ಟ್ (Karnoor Checkpost) ಬಳಿ ಸೂಕ್ತ ದಾಖಲೆಗಳಿಲ್ಲದೇ ಬೈಕ್‍ನಲ್ಲಿ ಸಾಗಿಸುತ್ತಿದ್ದ 25 ಲಕ್ಷ ರೂ. ಹಣವನ್ನು (Money) ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಹೊಸೂರಿನಿಂದ ಕರ್ನೂರು ಮಾರ್ಗವಾಗಿ ರಾಜೇಂದ್ರನ್ ಎಂಬವರು ಬೈಕ್‍ನಲ್ಲಿ ಹಣ ತರುತ್ತಿದ್ದರು. ಈ ವೇಳೆ ಅಧಿಕಾರಿಗಳು ಬೈಕ್ ತಡೆದು ಬ್ಯಾಗ್ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಸೂಕ್ತ ದಾಖಲೆಗಳಿಲ್ಲದೇ ಇರುವ 25 ಲಕ್ಷ ರೂ. ಹಣ ಪತ್ತೆಯಾಗಿದ್ದು, ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಬಳ್ಳಾರಿಯ ಬ್ರೂಸ್ ಪೇಟೆಯಲ್ಲೂ ದಾಖಲೆ ಇಲ್ಲದ 5.60 ಕೋಟಿ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳನ್ನು ಪೊಲೀಸರು (Police) ಜಪ್ತಿ ಮಾಡಿಕೊಂಡಿದ್ದರು. ಒಟ್ಟು 5.60 ಕೋಟಿ ರೂ. ನಗದು, 3 ಕೆಜಿ ಬಂಗಾರ 103 ಕೆಜಿ ಬೆಳ್ಳಿ ಆಭರಣ, 21 ಕೆಜಿ ಕಚ್ಚಾ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದರು. ಜಪ್ತಿ ಮಾಡಿದ ನಗದು ಹವಾಲಾಕ್ಕೆ ಸಂಬಂಧಿಸಿದ ಹಣ ಎನ್ನಲಾಗಿತ್ತು. ಪ್ರಕರಣ ಸಂಬಂಧ ಆರೋಪಿ ನರೇಶ್ ಎಂಬಾತನನ್ನ ವಶಕ್ಕೆ ಪಡೆದಿದ್ದರು
